ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾ ಬೀಚ್‌ಗಳಲ್ಲಿ ತಡರಾತ್ರಿವರೆಗೂ ಮದ್ಯಪಾನ, ಪಾರ್ಟಿ ಸಾಮಾನ್ಯವಾಗಿದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ಬೀಚ್‌ಗಳಲ್ಲಿ ಪಾರ್ಟಿಗೆ ಅವಕಾಶ ನೀಡಲಾಗುತ್ತದಾ?
ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.
ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎನ್ನುವ ಮಾಹಿತಿ ದೊರಕಿದೆ.
ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.