ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯ ರಾಮಮಂದಿರ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಶನಿವಾರ ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಮೊಬೈಲ್ ಫೋನ್ಗಳನ್ನು ಈಗಾಗಲೇ ನಿಷೇಧಿಸಲಾಗಿತ್ತು, ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.
ಐಜಿ ಹಾಗೂ ರಾಮಮಂದಿರ ಟ್ರಸ್ಟ್ ಅಧಿಕಾರಿ ಆಯುಕ್ತರ ಜತೆಗಿನ ಸಭೆಯಲ್ಲಿ ಮೊಬೈಲ್ ಫೋನ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಲಾಗಿದೆ. ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ. ಎಲ್ಲ ಸಂದರ್ಶಕರು ಈ ಒಪ್ಪಂದಕ್ಕೆ ಬದ್ಧರಾಗಿ ಮತ್ತು ಯಾರಿಗೂ ತೊಂದರೆಯಾಗದಂತೆ ಸಹಕರಿಸಲು ವಿನಂತಿಸಲಾಗಿದೆ.