BREAKING NEWS | ಇನ್ಮುಂದೆ ಹೊಟೇಲ್, ಉಪಾಹಾರ, ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಪ್ಲೀಟ್‌ ಬ್ಯಾನ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಲವು ಹೊಟೇಲ್ ಗಳು, ಉಪಾಹಾರ ಕೇಂದ್ರಗಳು, ಬೀದಿಬದಿ ತಿನಿಸು ಕೇಂದ್ರಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಕವರ್ ಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಮಾದರಿ ಪರೀಕ್ಷೆಗಳಿಂದ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಪ್ಲಾಸ್ಟಿಕ್‌ ಬ್ಯಾನ್‌ ಮಾಡುವಂತೆ ನಿಷೇಧ ಹೇರಲಾಗಿದೆ.

ವಿವಿಧ ತಿನಿಸು ಕೇಂದ್ರಗಳಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು ಶೇಕಡಾ 50ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೋಟೆಲ್​, ರಸ್ತೆಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು ಇನ್ನು ಮುಂದೆ ಬಳಸುವಂತಿಲ್ಲ. ಆಹಾರ ತಯಾರಿಕೆ, ವಿತರಣೆ ವೇಳೆ ಕೂಡ ಪ್ಲಾಸ್ಟಿಕ್ ಬಳಸಬಾರದು. ಆಹಾರದ ಬಿಸಿಗೆ ಪ್ಲಾಸ್ಟಿಕ್ ನಿಂದ ಹೊರಸೂಸುವ ಪದಾರ್ಥಗಳು ವಿಷಕಾರಿಯಾಗುತ್ತಿದ್ದು ಕ್ಯಾನ್ಸರ್ ಕಾರಕ ಅಂಶಗಳನ್ನು ಸಹ ಹೊರಸೂಸುತ್ತದೆ ಎಂದು ವರದಿಯಿಂದ ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ ತಿನಿಸು ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬದಲಿಗೆ ಬಟ್ಟೆಯನ್ನೇ ಬಳಸಬೇಕು ಎಂದು ಕಡ್ಡಾಯವಾಗಿ ನಿಯಮ ಹೊರಡಿಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!