ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನಾಯಿ ಕಡಿತಕ್ಕೆ ಒಳಗಾದವರಿಗೆ ಆರ್ಥಿಕ ನೆರವನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ. ಅಲ್ಲದೇ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ತಿದ್ದುಪಡಿ ಆದೇಶ ಹೊರಡಿಸಲಾಗಿದ್ದು, ನಾಯಿ ಕಡಿತಕ್ಕೆ ಒಳಗಾದ ಸಂದರ್ಭ ಕೂಡಲೇ ಚಿಕಿತ್ಸೆ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ತಿಳಿಸಲಾಗಿದೆ. ಜೊತೆಗೆ ನಾಯಿ ಕಡಿತಕ್ಕೆ ಒಳಗಾದ ಸಂತ್ರಸ್ತರಿಗೆ 3,500 ಆರ್ಥಿಕ ನೆರವು ಹಾಗೂ 1,500 ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಗೆ ಸಂದಾಯಿಸೋದಕ್ಕೆ ಆದೇಶಿಸಿದೆ.
ಇನ್ನೂ ರಾಜ್ಯದಲ್ಲಿ ನಾಯಿ ಕಡಿತಕ್ಕೆ ಒಳಗಾಗಿ ಮೃತಪಟ್ಟರೇ, ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ನೀಡುವುದಾಗಿಯೂ ಆದೇಶದಲ್ಲಿ ತಿಳಿಸಲಾಗಿದೆ.
ನಾಯಿ ಕಡಿತಕ್ಕೆ ಒಳಗಾಗುವ ನಾಗರೀಕರು ಸಂಬಂಧಿಸಿದಂತೆ ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

