September 26, 2026
Saturday, September 26, 2026
spot_img

ಇನ್ಮುಂದೆ ತಿಂಗಳಿಗೆ ಎರಡು ಶನಿವಾರ ‘ಪ್ರಜಾಸೇವೆ ಸಭೆ’: ಸ್ಥಳದಲ್ಲೇ ಸಿಗಲಿದೆ ನಿಮ್ಮ ಸಮಸ್ಯೆಗಳಿಗೆ ಪರಿಹಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಾರ್ವಜನಿಕರ ದೂರು ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಂದು ಬಿಗ್ ಪ್ಲ್ಯಾನ್‌ ಮಾಡಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಜನಪರ ಅಭಿಯಾನಕ್ಕೆ ಇಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ರಾಜ್ಯ ಮಟ್ಟದ ಚಾಲನೆ ದೊರೆಯಲಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಈ ಜನಪರ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದರ ಭಾಗವಾಗಿ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಗುರುಕೃಪ ಮಂಗಳ ಕಾರ್ಯಾಲಯದಲ್ಲಿ ‘ಪ್ರಜಾಸೇವೆ ಸಭೆ’ಯನ್ನು ಆಯೋಜಿಸಲಾಗಿದೆ.

ಇನ್ಮುಂದೆ ತಿಂಗಳಿಗೆ ಎರಡು ಬಾರಿ ಸಭೆ

ಇನ್ಮುಂದೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವೆ ಅಭಿಯಾನ’ದ ಸಭೆಗಳು ನಡೆಯಲಿವೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ಈ ಸಭೆಗಳು ನಡೆಯಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಮಂಡಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಇದನ್ನೂ ಓದಿ:

ಜನರ ಬಳಿಗೆ ಸರ್ಕಾರ

ಸಾರ್ವಜನಿಕರು ಕಚೇರಿಗಳಿಂದ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದೇ ಈ ‘ಪ್ರಜಾಸೇವೆ’ಯ ಮುಖ್ಯ ಆಶಯವಾಗಿದೆ. ಸರ್ಕಾರವೇ ಜನರ ಬಾಗಿಲಿಗೆ ಬಂದು ಸೇವೆ ನೀಡುವ ಈ ಅದ್ಭುತ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕಾಗಿ ತಿಳಿಸಲಾಗಿದೆ.

Must Read