ಇನ್ಮುಂದೆ ಹೇಗೆಂದರೆ ಹಾಗೆ ಟ್ಯಾಟೂ ಹಾಕಿಸುವಂತಿಲ್ಲ, ಆರೋಗ್ಯ ಇಲಾಖೆ ಕಡೆಯಿಂದ ಸ್ಟ್ರಿಕ್ಟ್‌ ರೂಲ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದೆ ಎನ್ನಲಾಗಿದೆ.

ದೇಶದಲ್ಲಿ ಟ್ಯಾಟೂಗೆ ಯಾವುದೇ ನಿಯಂತ್ರಣ ಕಾನೂನುಗಳಿಲ್ಲ. ಮೊದಲ ಬಾರಿಗೆ ರಾಜ್ಯ ಸರ್ಕಾರ ಟ್ಯಾಟೂಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ಪತ್ರ ಪಡೆದಿರಬೇಕು. ಟ್ಯಾಟೂ ಹಾಕುವರು ತಾವು ಬಳಸುವ ಬಣ್ಣ, ಕ್ಯಮಿಕಲ್​, ಸೂಜಿ ಮತ್ತು ಸ್ವಚ್ಛತೆ ಕುರಿತಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಹ ಹೊಸ ಮಾರ್ಗಸೂಚಿಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಚರ್ಮ ಕ್ಯಾನ್ಸರ್, ಹೆಚ್​ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್‌ನಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಿದಾಗ ಈ ಸೋಂಕುಗಳು ಹರಡಲು ಟ್ಯೂಟೂ ಕೂಡ ಒಂದು ಕಾರಣವಾಗಿದೆ. ಹೀಗಾಗಿ, ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!