ಇನ್ಮುಂದೆ ಪಕ್ಷದಲ್ಲಿ ಯುವಕರಿಗೆ ಜವಾಬ್ದಾರಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಚಿನ್‌ ಪೈಲಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಕ್ಷದೊಳಗೆ ಯುವಕರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡುತ್ತಿದ್ದು, ಅವರು ನಿಧಾನವಾಗಿ ಯುವಕರು ಮುನ್ನಲೆಗೆ ಬರುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಸಚಿನ್‌ ಪೈಲಟ್‌ ಹೇಳಿದ್ದಾರೆ.

ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿ, ಸಂಸತ್ತಿನಲ್ಲಿ, ಸಂಸತ್ತಿನ ಹೊರಗೆ, ರಾಜ್ಯ ಘಟಕಗಳಲ್ಲಿ ಅಥವಾ ಎಐಸಿಸಿಗೆ ನೇಮಕ ಮಾಡುವಾಗ ಹೊಸ ಮುಖಗಳಿಗೆ, ಯುವಕರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ. ರಾತ್ರಿ ಬೆಳಗಾಗುವುದರ ಒಳಗೆ ಬದಲಾವಣೆಗಳು ಸಾಧ್ಯವಿಲ್ಲ ಎಂದರು.

2024ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಪಕ್ಷದ ಸಾಂಸ್ಥಿಕ ಸ್ವರೂಪವನ್ನು ಮತ್ತಷ್ಟು ಬಲಗೊಳಿಸುವುದರ ಕಡೆಗೆ ಗಮನ ಹರಿಸುತ್ತೇವೆ ಎಂದು ನಾವು ಘೋಷಿಸಿದ್ದೇವೆ. ಇದಕ್ಕೆ ಪಕ್ಷ ಬದ್ಧವಾಗಿದ್ದು, ಅದೇ ಹಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!