ದಿಗಂತ ವರದಿ ವಿಜಯಪುರ:
ಕಿಡಿಗೇಡಿಗಳು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಗರಗುಂಡದಲ್ಲಿ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣವಾಗಿದೆ.
ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಭಾವಚಿತ್ರಕ್ಕೆ
ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದು, ಸ್ಥಳದಲಿ ಬಿಗುವಿನ ವಾತಾವರಣವಿದೆ.
ಸ್ಥಳಕ್ಕೆ ತಾಳಿಕೋಟಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದರು.