ಕೇಂದ್ರದಿಂದ ಅಬಕಾರಿ ಸುಂಕ ಇಳಿಕೆ: ಮೂರು ರಾಜ್ಯಗಳಿಂದ ವ್ಯಾಟ್ ಕಡಿತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕೇರಳವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದೆ.
ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ ಮತ್ತು ಡೀಸೆಲ್‌ಗೆ 1.44 ರೂ ಕಡಿತಗೊಳಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 2,500 ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ ಎಂದು ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಕೇರಳದ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರವು ಶನಿವಾರ ಕೇಂದ್ರ ಸರ್ಕಾರವು ಇಂಧನ ಬೆಲೆಯನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ರಾಜ್ಯ ತೆರಿಗೆಯನ್ನು ಕ್ರಮವಾಗಿ ಲೀಟರ್‌ಗೆ ರೂ 2.41 ಮತ್ತು ರೂ 1.36 ರಷ್ಟು ಕಡಿತಗೊಳಿಸುವುದಾಗಿ ಘೋಷಿಸಿತ್ತು.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ರಾಜ್ಯ ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.48 ರೂಪಾಯಿ ಮತ್ತು ಡೀಸೆಲ್ ಮೇಲೆ 1.16 ರೂಪಾಯಿಗಳಷ್ಟು ವ್ಯಾಟ್ ಅನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!