ಕೇಂದ್ರದಿಂದ ಕಣ್ಣಿನ ಆಸ್ಪತ್ರೆ ತೆರೆಯಲು ಚಿಂತನೆ: ಕೂಡಿಗೆಯಲ್ಲಿ ಶಾಸಕರಿಂದ ಸ್ಥಳ ಪರಿಶೀಲನೆ

ಹೊಸ ದಿಗಂತ ವರದಿ, ಮಡಿಕೇರಿ:

ಕೇಂದ್ರ ಸರಕಾರದ ವತಿಯಿಂದ ಕೂಡಿಗೆಯಲ್ಲಿ ನೂತನವಾಗಿ ಕಣ್ಣಿನ ಆಸ್ಪತ್ರೆ ತೆರೆಯುವ ಚಿಂತನೆ ನಡೆಸಲಾಗಿದ್ದು, ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದಲ್ಲಿರುವ ಖಾಲಿ ಜಾಗವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಪರಿಶೀಲನೆ ನಡೆಸಿದರು.
ಕೇಂದ್ರ ಸರ್ಕಾರದ ಸೂಚನೆಯಂತೆ ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಕಣ್ಣಿನ ಆಸ್ಪತ್ರೆಯನ್ನು ತೆರೆಯಲು ಚಿಂತನೆ ನಡೆದಿದ್ದು, ಈಗಾಗಲೇ ಸಂಬಂಧಿಸಿದ ಇಲಾಖೆಯ ಮೂಲಕ ಎಲ್ಲಾ ಪತ್ರ ವ್ಯವಹಾರಗಳು ನಡೆದು, ಪ್ರಸಕ್ತ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ.
ಕೂಡಿಗೆಯ ಕೃಷಿ ಕ್ಷೇತ್ರದ ಅವರಣದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪ ಮೂರು ಎಕರೆಗಳಷ್ಟು ಖಾಲಿ ಜಾಗವಿದ್ದು, ಇದರ ಪರಿಶೀಲನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳು ಸ್ಧಳ ಪರಿಶೀಲನೆ ಮಾಡಿ ವರದಿ ನೀಡಿದ ನಂತರ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದರು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್, ಶಾಸಕ ಅಪ್ತ ಕಾರ್ಯದರ್ಶಿ ರವಿ, ಅರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!