ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೇಂದ್ರ ಸರ್ಕಾರವು ಮೂರನೇ ಅಲೆಗೆ ಸಿದ್ಧತೆ ನಡೆಸಿದ್ದು, ಬಿಕ್ಕಟ್ಟಿನ ವಿರುದ್ಧ ಹೋರಾಡಲು 23,123 ಕೋಟಿ ರೂ.ಗಳ ತುರ್ತು ಪ್ಯಾಕೇಜ್ ಅನ್ನು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರು ಗುರುವಾರ ಘೋಷಿಸಿದ್ದಾರೆ.
ಮೊದಲ ಕೇಂದ್ರ ಸಚಿವ ಸಂಪುಟ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಾಂಡವೀಯಾ, ತುರ್ತು ಪ್ಯಾಕೇಜ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದರು. ಕೇಂದ್ರ ಸುಮಾರು 736 ಜಿಲ್ಲೆಗಳಲ್ಲಿ ಮಕ್ಕಳ ಆರೈಕೆ ಕೇಂದ್ರಗಳನ್ನು ರಚಿಸಲಿದ್ದು, ಕೋವಿಡ್ ಪರಿಹಾರ ನಿಧಿಯಡಿ ಸುಮಾರು 20,000 ಐಸಿಯು ಹಾಸಿಗೆಗಳನ್ನೂ ರಚಿಸಲಾಗುವುದು ಎಂದು ಹೇಳಿದರು.
ಕೋವಿಡ್ ವಿರುದ್ಧ ಒಟ್ಟಾಗಿ ಹೋರಾಡಬೇಕಾಗಿದ್ದು, ಅದನ್ನು ತ್ವರಿತವಾಗಿ ಮಾಡಬೇಕು ಎಂದು ಸಚಿವ ಮಾಂಡವೀಯಾ ಈ ಸಂದರ್ಭ ಹೇಳಿದರು.