ಇಂದಿನಿಂದ ಮತ್ತೆ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆನಾಡು ಭಾಗದ ಜನರ ನಿದ್ದೆಗೆಡಿಸಿರುವ ಕಾಡಾನೆಗಳ ಸೆರೆ ಕಾರ್ಯಾಚರಣೆ ಇಂದಿನಿಂದ ಮತ್ತೆ ಆರಂಭವಾಗಲಿದೆ.

ಅಂಬಾರಿ ಆನೆ ಅರ್ಜುನನ ಸಾವಿಗೆ ಕಾರಣವಾದ ಕಾಡಾನೆ ಸೆರೆಗೆ ಮಾವುತರ ಪಣ ತೊಟ್ಟಿದ್ದು, ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಬೇಲೂರು ತಾಲೂಕಿನ ಬಿಕ್ಕೋಡು ಆನೆ ಶಿಬಿರಕ್ಕೆ ಸಾಕಾನೆಗಳು ಆಗಮಿಸಿದ್ದು, ಈ ಬಾರಿ ೧೦ ಸಾಕಾನೆಗಳ ಮೂಲಕ ಕಾರ್ಯಾಚರಣೆ ಮಾಡಲಾಗುತ್ತಿದೆ. ಅಭಿಮನ್ಯು ನೇತೃತ್ವದಲ್ಲಿ ಬೇಲೂರಿನಲ್ಲಿ ಕಾರ್ಯಾಚರಣೆ ನಡೆಸಲಾಗುವುದು.

ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕಾರ್ಯಾಚರಣೆ ಆರಂಭಕ್ಕೆ ಕಾರಣವಾಗಿದೆ. ಡಿ.೪ರಂದು ಕಾಡಾನೆ ದಾಳಿಯಿಂದ ಅರ್ಜುನ ಮೃತಪಟ್ಟಿದ್ದು, ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!