ಹೊಸ ದಿಗಂತ ಡಿಜಿಟಲ್ ಡೆಸ್ಕ್
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದ್ರೆ ಪ್ರವೇಶವಿಲ್ಲ ಸಮವಸ್ತ್ರ ಕಡ್ಡಾಯ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಇಂದು ನಡೆದ ಮಹತ್ವದ ಸಭೆ ಬಳಿಕ ಸಚಿವರು ಮಾತನಾಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಇಂದು ನಡೆದ ಮಹತ್ವದ ಸಭೆ ಬಳಿಕ ಸಚಿವರು ಮಾತನಾಡಿದರು.
ಮೇ ಮೊದಲ ವಾರದಲ್ಲಿ ‘ದ್ವಿತೀಯ ಪಿಯು’ ಫಲಿತಾಂಶ
ಮೇ ಮೊದಲ ವಾರದಲ್ಲಿ ‘ದ್ವಿತೀಯ ಪಿಯು’ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಪರೀಕ್ಷೆ ಸುಗಮವಾಗಿ ನಡೆಯಲು, ಮೌಲ್ಯಮಾಪನ ಪ್ರಕ್ರಿಯೆ ಹಾಗೂ ಫಲಿತಾಂಶ ಘೋಷಣೆಗೆ ಬೇಕಾದ ಎಲ್ಲ ಸಿದ್ಧತೆ ಮಾಡಲಾಗಿದೆ. ಮೇ ಮೊದಲ ವಾರದಲ್ಲಿ ‘ದ್ವಿತೀಯ ಪಿಯು’ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ. ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಈ ವ್ಯವಸ್ಥೆ ಮಾಡಿದ್ದೇವೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.