Tuesday, February 27, 2024

ನಾಳೆಯಿಂದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿ ವ್ಯಾಪ್ತಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆಯಿಂದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ನಡೆಯಲಿದೆ.

ಹಿರಿಯ ನಾಗರಿಕರು ಸರ್ಕಾರಿ ಕಚೇರಿಗಳಿಗೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ಹೇಳುವುದು ಕಷ್ಟ, ಇದಕ್ಕಾಗಿ ನಾಗರಿಕರ ಸಮಸ್ಯೆಯನ್ನು ಆಲಿಸಲು ಸರ್ಕಾರವೇ ಮನೆಯ ಬಾಗಿಲಿಗೆ ಬರುವ ಕಾರ್ಯಕ್ರಮ ಇದಾಗಿದೆ. ಹಿರಿಯರು ಮನೆಯಲ್ಲಿಯೇ ಕುಳಿತು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎನ್ನುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿನ 28 ವಿಧಾನಸಭಾ ವ್ಯಾಪ್ತಿಯಲ್ಲಿಯೂ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತವಾಗಿ ಜ.3ರಂದು ಮಹದೇವಪುರ ವಲಯ, ಜ.5ರಂದು ಯಲಹಂಕ ಹಾಗೂ ಜ.6ರಂದು ಪೂರ್ವ ವಲಯ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಖುದ್ದು ಡಿಕೆಶಿ ಅವರೇ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!