ಕಬ್ಬಿನ FRP ದರ ಪ್ರತಿ ಕ್ವಿಂಟಲ್‌ಗೆ 25ರೂ. ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ವರ್ಷದ ಅಕ್ಟೋಬರ್‌ನಿಂದ 2024-25ನೇ ಸಾಲಿಗೆ ಕಬ್ಬಿನ ಎಫ್‌ಆರ್‌ಪಿ ದರವನ್ನು ಪ್ರತಿ ಕ್ವಿಂಟಲ್‌ಗೆ ₹25 ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಬುಧವಾರ ಪ್ರಕಟಿಸಲಾಗಿದೆ.

ಇದೇ ವೇಳೆ ಪ್ರತಿ ಕ್ವಿಂಟಲ್ ಕಬ್ಬಿನ ಎಫ್ ಆರ್ ಪಿ ದರ ₹340ಕ್ಕೆ ಏರಿಕೆಯಾಗಲಿದೆ. ಕಬ್ಬನ್ನು ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!