ಇಂದಿನಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ, ಈ ಬಾರಿ ವಿಶೇಷತೆ ಏನು ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಲಿದೆ.

ಇಂದು ಸಂಜೆ ಆರು ಗಂಟೆಗೆ ಸಿಎಂ ಸಿದ್ದರಾಮಯ್ಯ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. 216ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.

ಈ ಬಾರಿ ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯರ ಕುರಿತಾದ ಕಾನ್ಸೆಪ್ಟ್ ಇಡಲಾಗಿದೆ. ಒಟ್ಟಾರೆ 10 ಲಕ್ಷಕ್ಕೂ ಹೆಚ್ಚು ಮಂದಿ ಫ್ಲವರ್ ಶೋಗೆ ಬರುವ ನಿರೀಕ್ಷೆ ಇದೆ. ಇಂದಿನಿಂದ ಆರಂಭವಾಗಿ ಆಗಸ್ಟ್ 15ರವರೆಗೂ ಶೋ ನಡೆಯಲಿದೆ.

ಒಟ್ಟಾರೆ ಫ್ಲವರ್‌ಶೋಗಾಗಿ ಎರಡೂವರೆ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಈ ಬಾರಿ ಸ್ವದೇಶಿ ಹೂವುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇನ್ನು ಒಟ್ಟಾರೆ ೬೯ ಬಗೆಯ ಹೂವುಗಳನ್ನು ಬಳಸಿ ಫಲಪುಷ್ಪ ಪ್ರದರ್ಶನಕ್ಕೆ ತಯಾರು ಮಾಡಲಾಗಿದೆ.

ಫ್ಲವರ್ ಶೋ ಕಾರಣದಿಂದಾಗಿ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಎದುರಗಲಿದೆ, ಹೀಗಾಗಿ ಪರ್ಯಾಯ ಮಾರ್ಗ ಹಾಗೂ ಸುಸಜ್ಜಿತ ಪಾರ್ಕಿಂಗ್ ನಿರ್ಮಾಣ ಮಾಡಲಾಗಿದೆ. ಲಾಲ್‌ಬಾಗ್‌ನ ನಾಲ್ಕೂ ಎಂಟ್ರಿಗಳಲ್ಲಿ ಟಿಕೆಟ್ ವಿತರಿಸಲಾಗುತ್ತಿದೆ.

ಇಡೀ ಫ್ಲವರ್ ಶೋನಲ್ಲಿ ಒಟ್ಟಾರೆ 200ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇನ್ನು ಮಹಿಳೆಯರಿಗೆ ಎರಡು ವಿಶೇಷ ಶಿಬಿರ ಏರ್ಪಡಿಸಲಾಗಿದೆ. ನಮ್ಮ ಸಾಕು ನಾಯಿಗಳನ್ನು ಕರೆತರುವವರಿಗೂ ವ್ಯವಸ್ಥೆ ಮಾಡಲಾಗಿದ್ದು, ನಾಯಿಗಳಿಗೆ ವ್ಯಾಕ್ಸಿನ್ ಕೌಂಟರ್ ತೆರೆಯಲಾಗಿದೆ. ಆಂಬುಲೆನ್ಸ್, ಫಸ್ಟ್ ಏಡ್ ಎಮರ್ಜೆನ್ಸಿಗೆ ವ್ಯವಸ್ಥೆಯನ್ನೂ ಮಾಡಿಕೊಡಲಾಗಿದೆ.ದೊಡ್ಡವರಿಗೆ ಟಿಕೆಟ್ ದರ 70 ರೂಪಾಯಿ ಹಾಗೂ ಮಕ್ಕಳಿಗೆ 30 ರೂಪಾಯಿ ದರ ನಿಗದಿಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!