ಹೊಸದಿಗಂತ ಮಂಡ್ಯ :
ನಗರದ ತೋಟಗಾರಿಕಾ ಇಲಾಖೆ ಆವರಣದ ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಹೂಗಳಿಂದ ಹಲವಾರು ಕಲಾಕೃತಿಗಳು ಅರಳಿ ನಿಂತಿದ್ದು, ಜನರನ್ನು ಕೈ ಬೀಸಿ ಕರೆಯುತ್ತಿದೆ. ಸೆಲ್ಫಿ ಪಾಯಿಂಟ್‌ಗಳಲ್ಲಿ ಎಲ್ಲರೂ ಫೋಟೋ ತೆಗೆದುಕೊಳ್ಳುತ್ತಿದ್ದದ್ದು, ವಿಶೇಷವಾಗಿತ್ತು.
9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ವಿಶೇಷವಾಗಿತ್ತು. ವಿವಿಧ ಹೂ ಅಲಂಕಾರಿಕ ಕುಂಡಗಳ ಜೋಡಣೆ, ವಿವಿಧ ತರಕಾರಿ ಬೆಳೆಗಳು ಹಾಗೂ ಪೌಷ್ಠಿಕ ಕೈತೋಟ ಮಾದರಿ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ ಮತ್ತು ಜಿಲ್ಲೆಯ ತೋಟಗಾರಿಕೆ ಬೆಳೆಗಳ ವೈವಿದ್ಯತೆಯ ಮಾದರಿಗಳ ಪ್ರದರ್ಶನ ಆಕರ್ಷಕವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಫಲಪುಷ್ಪ ಪ್ರದರ್ಶನ ಮತ್ತು ಜವಳಿ ಇಲಾಖೆ ಆಯೋಜಿಸಿರುವ ಮಧು ವಸ್ತ್ರೋತ್ಸವಕ್ಕೆ ಚಾಲನೆ ನೀಡಿದರು.
ಪ್ರಮುಖ ಆಕರ್ಷಣೆಳಿವು :
ಫಲಪುಷ್ಪ ಪ್ರದರ್ಶನದಲ್ಲಿ 9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ವಿವಿಧ ಬಣ್ಣದ ಗುಲಾಬಿ ಹೂವುಗಳನ್ನು ಬಳಸಿ ಪ್ರಸಿದ್ದ ದೇವಾಲಯ ಹಾಗೂ ಪ್ರಸಿದ್ದ ಪ್ರವಾಸಿ ತಾಣಗಳನ್ನು ನಿರ್ಮಿಸಲಾಗಿದೆ.