ಹೊಸದಗಂತ ವರದಿ ಗದಗ:
ಕೋಟ್ಯಂತರ ರೂ. ಹಣ ಅನುದಾನ ಬರದಿದ್ದಕ್ಕೆ ನೊಂದಿರುವ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟು ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಗದಗನ KRIDL AEE ಫರ್ವೀಜ್ ಧಾರವಾಡ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ KRIDLನ ಎಂಡಿ ಅವರಿಗೆ ಪತ್ರ ಬರೆದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ರದಲ್ಲಿ ಅನುದಾನ ಬಿಡುಗಡೆಯಾಗದ ಕುರಿತು ಉಲ್ಲೇಖಿಸಲಾಗಿದೆ. ಕೋಟ್ಯಂತರ ರೂ. ಹಣ ಅನುದಾನ ಬಂದಿಲ್ಲ. ಮನೆಯ ಮುಂದೇ ಸಬ್ ಗುತ್ತಿಗೆದಾರರು ಬಂದು ಕೂಗಾಟ ಮಾಡುತ್ತಾರೆ. ಸರ್ಕಾರದ ಅನುದಾನ ಬಾರದ ಕಾರಣ ನಿತ್ಯ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು. ಇದು ನನ್ನ ಮಾನಸಿಕ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರಿದೆ. ನನ್ನ ಜೀವನವನ್ನೇ ಕೊನೆಗಾಣಿಸುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ನಾನು ಪರಿಸ್ಥಿತಿ ನಿಭಾಯಿಸುವಲ್ಲಿ ಸೋತಿದ್ದೇನೆ. ಸದರಿ ಉಪವಿಭಾಗಕ್ಕೆ ಅನುದಾನ ನೀಡಿ ಸಮಸ್ಯೆ ಬಗೆಹರಿಸಿ. ಬೇರೆ AEEಯನ್ನು ನಿಯೋಜನೆಗೊಳಿಸಿ. ದಯವಿಟ್ಟು ನನ್ನ ಕುಟುಂಬದವರಿಗೆ ಕಿರುಕುಳ ನೀಡಬೇಡಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:
ಇದೇ ಸೆ. 12ರಂದು ಎಂಡಿ ಗೆ ಪತ್ರ ಬರೆದಿರುವ ಎಇಇ ಫರ್ವೀಜ್ ಮರುದಿನ ಸೆ.13 ಬೆಂಗಳೂರಿನಲ್ಲಿ ಮೀಟಿಂಗ್ ಎಂದು ಹೋಗಿದ್ದರು. ಸೆ.19ರಂದು ನಾಪತ್ತೆ ಪ್ರಕರಣ ದಾಖಲಾಗಿದೆ.
ಪತ್ನಿ ಹಾಗೂ ಓರ್ವ ಮಗಳು ತಂದೆ ತಾಯಿ ಸಹೋದರರನ್ನ ಬಿಟ್ಟು ಅಧಿಕಾರಿ ನಾಪತ್ತೆಯಾಗಿದ್ದಾರೆ. ಎಇಇ ನಾಪತ್ತೆಯಿಂದ ಕುಟುಂಬ ಕಂಗಾಲಾಗಿದ್ದು, ಆತ್ಮಹತ್ಯೆ ಬಗ್ಗೆ ಪತ್ರ ಬರೆದು ನಾಪತ್ತೆ ಕುಟುಂಬಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಎಇಇ ಯನ್ನ ಹುಡುಕಿಕೊಡಿ ಅವನಿಗೆ ಆಗಿರುವ ಸಮಸ್ಯೆ ಪರಿಹಾರ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದೆ. ಪೊಲೀಸ್ ಇಲಾಖೆ ತಂಡ ರಚಿಸಿ ಆದಷ್ಟು ಬೇಗನೆ ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.



