Friday, December 9, 2022

Latest Posts

ಎಫ್‌​ಎಸ್​​ಎಲ್​ ಅಧಿಕಾರಿ ಆತ್ಮಹತ್ಯೆ: ಡೆತ್​ನೋಟ್ ನಲ್ಲಿತ್ತು ವಿಚ್ಛೇದಿತ ಪತಿಗೆ ‘ಸಾರಿ’!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಅಪಾರ್ಟ್​ಮೆಂಟ್​ವೊಂದರಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಡೆತ್​ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.

ಎಫ್‌ಎಸ್​ಎಲ್​ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್​​ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು ಕ್ಷಮಿಸುವಂತೆ ಡೆತ್​ನೋಟ್​ ಮೂಲಕ ವಿಚ್ಛೇದಿತ ಪತಿಯಲ್ಲಿ ಕೋರಿಕೊಂಡಿದ್ದಾರೆ. ಜೊತೆಗೆ ಪಾಲಕರಲ್ಲೂ ಕ್ಷಮೆ ಕೋರಿದ್ದಾರೆ. ಅಲ್ಲದೆ ನನ್ನ ಸಾವಿಗೆ ನಾನೇ ಕಾರಣ ಎಂದೂ ಬರೆದುಕೊಂಡಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!