ಮಲಯಾಳಂ ಸ್ಟಾರ್​ ಜೊತೆ ಹೊಂಬಾಳೆ ಸಂಸ್ಥೆ ಹೊಸ ಸಿನಿಮಾ: ಪೋಸ್ಟರ್ ರಿಲೀಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆಜಿಎಫ್ ಚಾಪ್ಟರ್ 2′ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ಮತ್ತೊಂದು ಪ್ಯಾನ್ ಇಂಡಿಯಾ ವೆಂಚರ್​ಗೆ ನಿರ್ಮಾಣ ಸಂಸ್ಥೆ ನಾಂದಿ ಹಾಡಿದೆ.
ಯಾವಾಗಲೂ ಹೊಸ ಕಥೆ, ಹೊಸ ನಿರ್ದೇಶಕ ಹಾಗೂ ಸ್ಟಾರ್​​ಗಳ ಸಿನಿಮಾಗಳಿಗೆ ಕೋಟಿಗಟ್ಟಲೆ ಬಂಡವಾಳ ಹೂಡುವ ನಿರ್ಮಾಪಕ ವಿಜಯ್ ಕಿರಂಗದೂರ್, ಈ ಬಾರಿ ಮಲೆಯಾಳಂ ಸ್ಟಾರ್ ನಟನನ್ನು ಕನ್ನಡಕ್ಕೆ ಕರೆತರುತ್ತಿದ್ದಾರೆ‌.
ಹೌದು, ನಿನ್ನೆಯಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಸ್ವ್ಯಾಗ್ ಪಂಚ್ ಸ್ವಿಂಗ್ ಎಂಬ ವಿಭಿನ್ನ ಪೋಸ್ಟರ್​ ಮೂಲಕ ಹೊಂಬಾಳೆ ಫಿಲ್ಮ್ಸ್ ಕುತೂಹಲ ಹುಟ್ಟಿಸಿತ್ತು. ಇದೀಗ ಆ ಪ್ರಶ್ನೆಗೆ ಉತ್ತರ ನೀಡಿದೆ.
ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಜೊತೆ ಹೊಂಬಾಳೆ ಸಂಸ್ಥೆ ಪ್ಯಾನ್ ಇಂಡಿಯಾ ಸಿನೆಮಾ ಮಾಡುತ್ತಿದೆ. ‘ಟೈಸನ್’ ಅಂತಾ ಶೀರ್ಷಿಕೆ ಇಡಲಾಗಿದ್ದು, ಪೋಸ್ಟರ್ ಕೂಡ ಅನಾವರಣಗೊಂಡಿದೆ.
ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಲಾಂಚ್​ಗೆ ಬಂದಿದ್ದ ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ನಟನೆ ಜೊತೆಗೆ ನಿರ್ದೇಶನ, ನಿರ್ಮಾಣ ಹಾಗೂ ಗಾಯನದ ಮೂಲಕ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿದ್ದಾರೆ.

ವೃದ್ಧರೊಬ್ಬರು ಬೋರ್ಡ್​ ಮೇಲೆ ಹೆಸರು ಬರೆಯುತ್ತಿರುವ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ನೋಡಿದರೆ ಸರ್ಕಾರಿ ಕಚೇರಿಗಳಲ್ಲಿ ದೊಡ್ಡ ಅಧಿಕಾರಿ ವರ್ಗಾವಣೆ ಆದಾಗ ಅವರು ಎಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು ಎಂಬುದನ್ನು ಈ ಪೋಸ್ಟರ್ ಸೂಚಿಸುವಂತಿದೆ.
ಚಿತ್ರದಲ್ಲಿ ಪೃಥ್ವಿರಾಜ್ ನಿರ್ದೇಶನದ ಜೊತೆಗೆ ಅಭಿನಯಿಸುತ್ತಿದ್ದಾರೆ. ಮುರಳಿ ಗೋಪಿ ಎಂಬುವರು ಸಿನಿಮಾದ ಕಥೆ ಬರೆದಿದ್ದು, ನಿರ್ಮಾಪಕ ವಿಜಯ್ ಕಿರಂಗದೂರ್ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗು ಹಿಂದಿ ಭಾಷೆಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!