March 12, 2026
Thursday, March 12, 2026
spot_img

ನನ್ನ ಆಸೆ ಈಡೇರಿಸು.. ಸೊಸೆಗೆ ಜೀವ ಬೆದರಿಕೆ, ಲೈಂಗಿಕ ಕಿರುಕುಳ ನೀಡಿದ ಪಾಪಿ ಮಾವ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಆರ್.ಟಿ. ನಗರದಲ್ಲಿ ಮಾನವೀಯ ಸಂಬಂಧಗಳೇ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಥಣಿಸಂದ್ರದ ಪ್ರತಿಷ್ಠಿತ ಶಾಲೆಯೊಂದರ ಪ್ರಾಂಶುಪಾಲರಾಗಿರುವ ಮಹಿಳೆಗೆ, ಆಕೆಯ ಮಾವನೇ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರು ದಾಖಲಾಗಿದೆ.

2007ರಲ್ಲಿ ವಿವಾಹವಾಗಿದ್ದ ಸಂತ್ರಸ್ತೆಗೆ ಆರಂಭದಲ್ಲಿ ಸಂಸಾರ ಸುಗಮವಾಗಿಯೇ ಇತ್ತು. ಆದರೆ, 2020ರಿಂದ ಮಾವನ ವಿಕೃತ ಚೇಷ್ಟೆಗಳು ಮಿತಿಮೀರಿವೆ. ಪಕ್ಕದ ಅಪಾರ್ಟ್‌ಮೆಂಟ್‌ನಲ್ಲೇ ವಾಸವಿದ್ದ ಆರೋಪಿ, ಸೊಸೆ ಮನೆಯಲ್ಲಿ ಒಬ್ಬಳೇ ಇರುವುದನ್ನು ಹೊಂಚು ಹಾಕಿ ಬಂದು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ.

ವಿಷಯವನ್ನು ಪತಿಗೆ ತಿಳಿಸಿದರೆ ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲುವುದಾಗಿ ಆರೋಪಿ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ. ಮನೆಯಷ್ಟೇ ಅಲ್ಲದೆ, ಅಪಾರ್ಟ್‌ಮೆಂಟ್ ಲಿಫ್ಟ್ ಮತ್ತು ಶಾಲೆಯ ಕ್ಯಾಬಿನ್‌ನಲ್ಲೂ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ್ದ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:

ಸೊಸೆಯ ಸೌಂದರ್ಯದ ಬಗ್ಗೆ ಅಸಭ್ಯವಾಗಿ ಪತ್ರ ಬರೆದು ತಂದು, ಅವಳ ಮುಂದೆಯೇ ಓದಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಹಿಂದೆ ಪತಿ ಮತ್ತು ಹಿರಿಯರು ಬುದ್ಧಿ ಹೇಳಿದ್ದರೂ, ಆರೋಪಿ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ್ದರಿಂದ ಸಂತ್ರಸ್ತೆ ಅಂತಿಮವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಪ್ರಸ್ತುತ ಆರ್.ಟಿ. ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !