ಪೆನ್‍ಡ್ರೈವ್ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ: ಅಣ್ಣಾಮಲೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ.  ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಮೇ 7ರಂದು ರಾಜ್ಯದಲ್ಲಿ ಉಳಿದ 14 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಅಣ್ಣಾಮಲೈ ಪ್ರಚಾರ ನಡೆಸಿದ್ದಾರೆ.

ಜಮಖಂಡಿ ಮತ್ತು ರಬಕವಿ ಬನಹಟ್ಟಿಯಲ್ಲಿ ಅವರು ಇಂದು ಗುರುವಾರ ಪ್ರಚಾರ ನಡೆಸಿದರು. ಈ ವೇಳೆ 2019ರ ಚುನಾವಣೆಯಲ್ಲಿಯಂತೆ ಉತ್ತರ ಕರ್ನಾಟಕದ ಎಲ್ಲಾ 14 ಸ್ಥಾನಗಳನ್ನು ಬಿಜೆಪಿ ಈ ಬಾರಿಯೂ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ, ಕಾಂಗ್ರೆಸ್ ಸೋಲುತ್ತಾ ಇರುವ ಪಕ್ಷ. ಸೋಲುವವರು ಹತಾಶೆಯಲ್ಲಿ ಏನೇನೋ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾವು 10 ವರ್ಷ ಕೆಲಸ ಮಾಡಿದ್ದೇವೆ. ನಮ್ಮ ಕೆಲಸವನ್ನು ಜನರು ನೋಡಿದ್ದಾರೆ. ಇನ್ನೂ 5 ವರ್ಷ ಮೋದಿಜಿ ಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!