ಕರ್ನಾಟಕದಲ್ಲಿ ರಸಗೊಬ್ಬರಕ್ಕೆ ಫುಲ್ ಡಿಮ್ಯಾಂಡ್: ಜೆಪಿ ನಡ್ಡಾ ಭೇಟಿಯಾದ ಬಿಜೆಪಿ ಸಂಸದರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿದೆ. ಆದ್ರೆ, ರಸಗೊಬ್ಬರ ಕೊರತೆ ಎದುರಾಗಿದೆ. ಕೇಂದ್ರ ಗೊಬ್ಬರ ಕೊಟ್ಟರೂ ರಾಜ್ಯ ಸರ್ಕಾರ ಕೊಡುತ್ತಿಲ್ವಾ? ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದಲೇ ಸರಬರಾಜು ಆಗುತ್ತಿಲ್ವಾ? ಎಂಬ ಮಾಹಿತಿ ಸಿಗದ ರೈತ ತಲೆ ಮೇಲೆ ಕೈ ಹೊತ್ತು ಕೂತಿದ್ದಾನೆ.

ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಕರ್ನಾಟಕ ಬಿಜೆಪಿ ಸಂಸದರು, ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಅಗತ್ಯ ರಸಗೊಬ್ಬರ ಪೂರೈಕೆಗೆ ಮನವಿ ಮಾಡಿದ್ದಾರೆ.

ನಡ್ಡಾ ಅವರ ಭೇಟಿ ಮಾಡಿರುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲಾ. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಎಲ್ಲಾ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!