ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು ಕಡಿಮೆಯಾಗಬೇಕೆಂದರೆ ಲಾಕ್ ಡೌನ್ ಒಂದೇ ದಾರಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರಕ್ಕೆ ಇದು ತಿಳಿಯುವುದಿಲ್ಲ. ದೇಶದಲ್ಲಿ ಕೊರೋನಾ ಸಂಪೂರ್ಣವಾಗಿ ತೊಲಗಬೇಕೆಂದರೆ ಮತ್ತೆ ಫುಲ್ ಲಾಕ್ ಡೌನ್ ಮಾಡಬೇಕು. ಈ ವೇಳೆ ಬಡವರಿಗೆ ನ್ಯಾಯ್ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಮಾಡಬೇಕು. ಕೇಂದ್ರ ಸರ್ಕಾರ ಅಮಾಯಕ ಜನರನ್ನು ಕೊಲ್ಲುತ್ತಿದೆ ಎಂದು ಟೀಕಿಸಿದ್ದಾರೆ.
2019ರಲ್ಲಿ ಕಾಂಗ್ರೆಸ್ ನ್ಯಾಯ್ ಯೋಜನೆ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದರ ಅಡಿಯಲ್ಲಿ ಪ್ರತಿ ಕುಟುಂಬಕ್ಕೂ ವಾರ್ಷಿಕ 75 ಸಾವಿರ ರೂ. ನೀಡುವ ಬಗ್ಗೆ ತಿಳಿಸಿತ್ತು.