ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ತಿಳಿಸಿದ್ದಾರೆ.
ಈ ವೇಳೆ ಆಟೋಗಳು ಮತ್ತು ಟ್ಯಾಕ್ಸಿಗಳಲ್ಲಿ ವಿಮಾನ ನಿಲ್ದಾಣ, ಬಸ್ ಮತ್ತು ರೈಲು ನಿಲ್ದಾಣಗಳಿಗೆ ಹೋಗಲು ಅನುಮತಿ ಇದೆ.
ತಮಿಳುನಾಡಿನಲ್ಲಿ ಉಳಿದ ಎಲ್ಲಾ ದಿನಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ.
ಕೊರೋನಾ ಉಲ್ಬಣದ ಹಿನ್ನೆಲೆ ಸರ್ಕಾರವು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಿದೆ. ಲಾಕ್‌ಡೌನ್ ಶನಿವಾರ ರಾತ್ರಿ 10 ಗಂಟೆಗೆ ಪ್ರಾರಂಭವಾಗುತ್ತದೆ. ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.
ಹಾಲಿನ ಅಂಗಡಿಗಳು, ಎಟಿಎಂ ಕೇಂದ್ರಗಳು, ಆಸ್ಪತ್ರೆಗಳು, ಆಸ್ಪತ್ರೆಗೆ ಸಂಬಂಧಿಸಿದ ಕೆಲಸಗಳು, ಸರಕು ಸಾಗಣೆ ಮತ್ತು ಪೆಟ್ರೋಲ್ ಬಂಕ್‌ಗಳನ್ನು ಒಳಗೊಂಡಿರುವ ಕಾರ್ಯಾಚರಣೆಯ ಅಗತ್ಯ ಸೇವೆಗಳನ್ನು ಅನುಮತಿಸಲಾಗಿದೆ. ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳು ಬೆಳಿಗ್ಗೆ 7 ರಿಂದ ರಾತ್ರಿ 10ರವರೆಗೆ ಪಾರ್ಸಲ್ ಸೇವೆಗಳನ್ನು ನೀಡಬಹುದು.