Monday, August 15, 2022

Latest Posts

ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಿ, ಜನರಿಗೆ ಅಗತ್ಯ ನೆರವು ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆಂದ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸಿಎಂ ಬಿಎಸ್ ವೈ ಅವರನ್ನು ಒತ್ತಾಯಿಸಿದ್ದಾರೆ.

ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ ಎಂದು ಆರೋಪಿಸಿದ್ದಾರೆ.

ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು ರಾಜ್ಯಸರ್ಕಾರದ ಜವಾಬ್ದಾರಿ ಎಂದಿದ್ದಾರೆ.

ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಬಿಜೆಪಿ ಪಕ್ಷವೇ  ನೇರಹೊಣೆ.

ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ.  ನಿತ್ಯ 50,000 ಪಾಸಿಟಿವ್ ಕೇಸ್ ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಸಿಎಂ ಬಿಎಸ್ ವೈ ಅವರನ್ನು ಆಗ್ರಹಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss