Thursday, August 11, 2022

Latest Posts

ನಾಗಲ್ಯಾಂಡ್‌ನಲ್ಲಿ ಮೇ 14 ರಿಂದ ಒಂದು ವಾರ ಸಂಪೂರ್ಣ ಲಾಕ್‌ ಡೌನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮೇ. 14 ರಿಂದ 7 ದಿನಗಳವರೆಗೆ ನಾಗಲ್ಯಾಂಡ್‌ನಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಬಗ್ಗೆ ಮಾತನಾಡಿದ ರಾಜ್ಯ ಸರ್ಕಾರದ ವಕ್ತಾರ ಮತ್ತು ಸಚಿವ ನೀಬಾ ಕ್ರೊನು, ಮೇ.14 ರಂದು ಸಂಜೆ 6ಗಂಟೆಯಿಂದ  ಮೇ 21 ರವರೆಗೆ ರಾಜ್ಯವ್ಯಾಪಿ ಸಂ‍ಪೂರ್ಣ ಲಾಕ್‌ಡೌನ್ ಜಾರಿ ಮಾಡಲು ಕೋವಿಡ್ -19 ಕುರಿತ ಉನ್ನತಾಧಿಕಾರ ಸಮಿತಿ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ನೀಫಿಯು ರಿಯೊ ಅವರ ಅಧ್ಯಕ್ಷತೆಯಲ್ಲಿ ನಡೆದ ಎಚ್‌ಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss