ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ವಿದ್ಯುತ್ ಸೇವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ಇಲಾಖೆ ಆರ್ಥಿಕವಾಗಿ ಹಾಗೂ ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಖಾಸಗೀಕರಣಕ್ಕೆ ಅವಕಾಶವಿಲ್ಲ
ಟಾಟಾ ಪವರ್ ವಿದ್ಯುತ್ ವಿತರಣೆಗೆ ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಿದ ಅವರು, ಎಸ್ಕಾಂಗಳು ಈಗಾಗಲೇ ತಮ್ಮ ಆಕ್ಷೇಪಣೆ ಸಲ್ಲಿಸಿವೆ. ಸರ್ಕಾರ ಯಾವುದೇ ಖಾಸಗಿ ಕಂಪನಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:
ಮುಂದಿನ 25 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಭದ್ರತಾ ಯೋಜನೆ ರೂಪಿಸಲಾಗಿದೆ. ಸೌರ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ರೈತರ ಸಹಭಾಗಿತ್ವದಲ್ಲಿ ಸೌರ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಮುಂದುವರಿಕೆ
ಗೃಹಜ್ಯೋತಿ ಯೋಜನೆಯಡಿ ಕೋಟ್ಯಂತರ ಗ್ರಾಹಕರಿಗೆ ಉಚಿತ ವಿದ್ಯುತ್ ಹಾಗೂ ರೈತರ ಪಂಪ್‌ಸೆಟ್‌ಗಳಿಗೆ ಸರ್ಕಾರ ಅನುದಾನ ನೀಡುತ್ತಿದೆ. ಜೊತೆಗೆ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಯ ಮೂಲಕ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯನ್ನು ಇನ್ನಷ್ಟು ಬಲಪಡಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.



