ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ರಾಜ್ಯದ ಹಲವು ಜಿಲ್ಲೆಗಳು ಅಭಿವೃದ್ಧಿ ಕಾರ್ಯಗಳಿಗೆ ಕಡಿಮೆ ಅನುದಾನ ಬಂದಿದೆ ಎಂದು ತಿಳಿಸಿದ್ದಾರೆ.
ಹರಿಪ್ರಸಾದ್ ಮಾತನಾಡಿ, ಅನುದಾನ ಬಂದಿಲ್ಲವೆಂದಲ್ಲ, ಹಿಂದಿನ ಅವಧಿಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ಅನುದಾನ ಬಂದಿದೆ. ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದರಿಂದ ಅನುದಾನ ಕಡಿಮೆ ಬಂದಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನವೂ ಕೂಡ ಅಭಿವೃದ್ಧಿ ಕೆಲಸ ಎಂದು ಹರಿಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ.
ಕೆಲವು ಶಾಸಕರು ಮಂತ್ರಿ ಸ್ಥಾನಬೇಕೆಂದು ಆಸೆ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಸಚಿವ ಸುಂಪುಟ ಪುನಾರಚನೆ ನಡೆಯುವುದು ನಿಶ್ಚಿತವೇ ಎಂದು ಕೇಳಿದ ಪ್ರಶ್ನೆಗೆ ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಇಲ್ಲವೇ ರಾಜ್ಯಪಾಲರಿಗೆ ಕೇಳಬೇಕಾದ ಪ್ರಶ್ನೆಯನ್ನು ನನಗೆ ಕೇಳೋದ್ಯಾಕೆ? ಅದರ ಬಗ್ಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.