ಮರಾಠ ಸಂಪ್ರದಾಯದಂತೆ ಅಂತ್ಯಕ್ರಿಯೆ: ಪಂಚಭೂತಗಳಲ್ಲಿ ಲೀನರಾದ ಹರ್ಷ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಭಾನುವಾರ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಮರಾಠ ಸಂಪ್ರದಾಯದಂತೆ ಸೋಮವಾರ ನೆರವೇರಿಸಲಾಯಿತು.
ಇದಕ್ಕೂ ಮುನ್ನ ಬಸವನ ಬೀದಿಯಲ್ಲಿರುವ ಹರ್ಷ ಅವರ ನಿವಾಸಕ್ಕೆ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗಿತ್ತು. ಅದಾದ ಬಳಿಕ ಮೆರವಣಿಗೆಯ ಮೂಲಕ ಹರ್ಷ ಪಾರ್ಥೀವ ಶರೀರವನ್ನು ಚಿತಾಗಾರಕ್ಕೆ ಕೊಂಡೊಯ್ಯಲಾಯಿತು.
ಹರ್ಷ ಪಾರ್ಥೀವ ಶರೀರಕ್ಕೆ ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ಮರಾಠ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಿ ಬಳಿಕ ಹರ್ಷ ಅವರ ತಂದೆ ನಾಗರಾಜ್ ಅವರು, ಚಿತೆಗೆ ಅಗ್ನಿ ಸ್ಪರ್ಷಗೈದರು.
ಮೆಗ್ಗಾನ್ ಆಸ್ಪತ್ರೆಯಲ್ಲಿ  ಹರ್ಷ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆದಿತ್ತು. ಬಳಿಕ ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!