ನಾಳೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ ಬೆಳಗ್ಗೆ 11.30ಕ್ಕೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ಯೋಜಿಸಲಾಗಿದೆ. ನಾಳೆ ಬೆಳಗ್ಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. ಬೆಳಗ್ಗೆ 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ತಿಳಿಸಿದ್ದಾರೆ.

ದ್ವಾರಕೀಶ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!