ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ಹಾವೇರಿಯಲ್ಲಿ ನೆರವೇರಲಿದೆ.
ಮಧ್ಯಾಹ್ನ 12 ಗಂಟೆಗೆ ಉದಾಸಿ ಅವರ ಪಾರ್ಥಿವ ಶರೀರ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣಕ್ಕೆ ಆಗಮಿಸಲಿದ್ದು, ಪಾರ್ಥಿವ ಶರೀರಕ್ಕೆ ಮಧ್ಯಾಹ್ನ 1 ಗಂಟೆಗೆ ಗೌಳಿ ಗಲ್ಲಿಯ ಸ್ವಗೃಹದಲ್ಲಿ ಪೂಜೆ ಮಾಡಲಾಗುತ್ತದೆ. ನಂತರ ಪಟ್ಟಣದ ವಿರಕ್ತ ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಉದಾಸಿ ಕುಟುಂಬದವರು ಮಾಹಿತಿ ನೀಡಿದ್ದಾರೆ.
ಲಿಂಗಾಯತ ವಿಧಿವಿಧಾನದ ಪ್ರಕಾರ ಸಂಜೆ ನಾಲ್ಕು ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.