Friday, June 2, 2023

Latest Posts

ಸಕಲ ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಬೆಂಗಳೂರು:

ಮಾರ್ಚ್ 23 ರಂದು ನಿಧನರಾದ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತೀವ್ರ ಸಂತಾಪ

“ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದರು.

 

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!