ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಕೋವಿಡ್ ಸೋಂಕು ಮತ್ತಷ್ಟು ಏರಿಕೆಯಾಗುವ ಮೂಲಕ ಜನತೆಯ ನಿದ್ದೆಗೆಡಿಸಿದೆ.
ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಒಂದೇ ದಿನದಲ್ಲಿ 265 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.
ಕೇರಳದಲ್ಲಿ ಸಧ್ಯ 2,606 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಆಸ್ಪತ್ರೆಗಳಲ್ಲಿ ಮಾಸ್ಕ್, ಸಾರ್ವಜನಿಕ ಸ್ಥಳಗಳಲ್ಲಿ ಸಮಾಜಿಕ ಅಂತರ ಕಾಯ್ದುಕೊಳ್ಳುವುದು ಇದೇ ಮೊದಲಾದ ಕ್ರಮಕ್ಕೆ ಸೂಚನೆ ನೀಡಿದ್ದರೂ ಸೋಂಕು ಇನ್ನಷ್ಟು ವ್ಯಾಪಿಸುತ್ತಲೇ ಇರುವುದು ಆರೋಗ್ಯ ಇಲಾಖೆಗೂ ನುಂಗಲಾದರ ಬಿಸಿ ತುಪ್ಪವಾಗುತ್ತಿದೆ.
ಈ ನಡುವೆ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.