ಜಿ-20 ಶೃಂಗಸಭೆ: ವಿವಿಧ ರಾಷ್ಟ್ರಗಳ ಮುಖ್ಯಸ್ಥರನ್ನು ಸ್ವಾಗತಿಸಲು ಸಜ್ಜಾದ ಹೊಸದಿಲ್ಲಿ !

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಅಧ್ಯಕ್ಷತೆಯಲ್ಲಿ ನಡೆಯುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ 29 ರಾಷ್ಟ್ರಗಳ ಮುಖ್ಯಸ್ಥರು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು ಮತ್ತು ಆಹ್ವಾನಿತ ದೇಶಗಳು ಮತ್ತು 14 ಅಂತಾರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸುವ ನಿರೀಕ್ಷೆಯಿದೆ.

ಭಾರತಕ್ಕೆ ಆಗಮಿಸುತ್ತಿರುವ ವಿವಿಧ ರಾಷ್ಟ್ರಗಳ ನಾಯಕರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರು ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದು, ಹೋಟೆಲ್​ಗೆ ಬಿಗಿ ಭದ್ರತೆ ನೀಡಲಾಗಿದೆ. ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳಿಗಾಗಿ 400 ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.

ಭದ್ರತಾ ಕಾರಣಗಳಿಗಾಗಿ ಐಷಾರಾಮಿ ಹೋಟೆಲ್‌ನ ಪ್ರತಿ ಮಹಡಿಯಲ್ಲೂ ರಹಸ್ಯ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಅಧ್ಯಕ್ಷರನ್ನು ಶಯನಗೃಹಕ್ಕೆ ಕರೆದೊಯ್ಯಲು ವಿಶೇಷ ಎಲಿವೇಟರ್ ವ್ಯವಸ್ಥೆ ಮಾಡಲಾಗಿದೆ. ಅದರ ಜೊತೆಗೆ, ವಿಶ್ವದ ಅತ್ಯಂತ ದುಬಾರಿ ಕಾರುಗಳು, ಆಧುನಿಕ ಶಸ್ತ್ರಾಸ್ತ್ರಗಳು, ಬಾಂಬ್ ಡಿಟೆಕ್ಟರ್‌ಗಳು, ನಿಯಂತ್ರಣ ಕೊಠಡಿ ವ್ಯವಸ್ಥೆ ರೂಪಿಸಲಾಗಿದೆ.

ಬ್ರಿಟನ್​ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಇತರ ಕೆಲವು ನಾಯಕರು ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿ ನೀಡುತ್ತಿರುವ ಸುನಕ್ ಅವರಿಗೆ ಇಲ್ಲಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಚೀನಾದ ಪ್ರಧಾನಿ ಪ್ರೀಮಿಯರ್ ಲಿ ಕಿಯಾಂಗ್ ನೇತೃತ್ವದ ನಿಯೋಗ ತಾಜ್ ಹೋಟೆಲ್‌ನಲ್ಲಿ ತಂಗಲಿದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಇಂಡೋನೇಷ್ಯಾದಿಂದ ಭಾರತಕ್ಕೆ ಆಗಮಿಸಲಿದ್ದು, ಅವರಿಗೆ ಲಲಿತ್ ಹೋಟೆಲ್‌ನಲ್ಲಿ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂಪೀರಿಯಲ್ ಹೋಟೆಲ್‌ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!