ಹೊಸದಿಗಂತ ತುಮಕೂರು :
ರಾಜ್ಯದಲ್ಲಿ ಮಾದಕ ವ್ಯಸನಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ರಗ್ಸ್ ಮುಕ್ತ ಕರ್ನಾಟಕವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಚರಣೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು.
ತುಮಕೂರಿನಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನೂರಾರು ಕೆ.ಜಿ. ಡ್ರಗ್ಸ್ ಸುಟ್ಟು ಹಾಕಿದ್ದೇವೆ. ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳು ಹಾಗೂ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರನ್ನು ಗಡಿಪಾರು ಮಾಡಲಾಗಿದೆ. ವ್ಯಾಸಂಗಕ್ಕಾಗಿ ಬಂದು ವೀಸಾ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
ಪುಂಡರ ಹಾವಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ವ್ಹೀಲಿಂಗ್ ಸೇರಿದಂತೆ ಪುಂಡಾಟಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ ಎಂದರು.