ಶ್ರೀನಗರದಲ್ಲಿ ಜಿ20 ಸಭೆ: ಉಗ್ರರ ದಾಳಿಯ ಎಚ್ಚರಿಕೆ ಹಿನ್ನೆಲೆ‌ ಗಡಿಯಲ್ಲಿ ಹೈ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀನಗರದಲ್ಲಿ ಮೇ 22 ರಿಂದ 24ರ ವರೆಗೆ ನಡೆಯಲಿರುವ ಜಿ-20 ಸಮ್ಮೇಳನವನ್ನು ಶಾಂತಿಯುತವಾಗಿ ನಡೆಸಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್ ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ . ಈ ಸಭೆಗೆ ಪಾಕಿಸ್ತಾನ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಗಡಿ ಮತ್ತು ನಿಯಂತ್ರಣ ರೇಖೆಯ ಮೂಲಕ ಪಾಕಿಸ್ತಾನದ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು. ಈ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆಯಲ್ಲಿ ಹೈ ಅಲರ್ಟ್ ಘೋಷಿಸಿದೆ.

ಕಳೆದ ಹಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿರುವುದರಿಂದ ಕಣಿವೆಯಲ್ಲಿ ಸೇನೆ ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

ಮಾಧ್ಯಮ ವರದಿಗಳ ಪ್ರಕಾರ, ಶ್ರೀನಗರ ಮತ್ತು ಜಮ್ಮು ನಗರದಲ್ಲಿ ಹೆಚ್ಚುವರಿ ಪಡೆಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಗಡಿಯಲ್ಲಿ ಭದ್ರತೆಯನ್ನೂ ಬಿಗಿಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!