ಜಿ20 ಶೃಂಗಸಭೆ ಮುಕ್ತಾಯ: ಭಾರತಕ್ಕೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆ ಅಂತ್ಯವಾಗಿದ್ದು,ಪ್ರಧಾನಿ ನರೇಂದ್ರ ಮೋದಿಯವರು ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ.

ತಮ್ಮ ಮೂರು ದಿನಗಳ ಬಾಲಿಗೆ ಪ್ರವಾಸದಲ್ಲಿ ಪ್ರಧಾನಿ ಮೋದಿಎಂಟರಿಂದ ಒಂಬತ್ತು ದೇಶಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದು, ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಿದ್ದಾರೆ.

ಯುಕೆ ಮತ್ತು ಆಸ್ಟ್ರೇಲಿಯಾದ ಸಹವರ್ತಿಗಳಾದ ರಿಷಿ ಸುನಕ್ ಮತ್ತು ಆಂಥೋನಿ ಅಲ್ಬನೀಸ್ ಅವರನ್ನು ಬುಧವಾರ ಭೇಟಿ ಮಾಡಿ ಉಭಯ ದೇಶಗಳ ಮುಖ್ಯಸ್ಥರೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಬಳಿಕ ಜಿ 20 ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿಭಾರತದ ಜಿ 20 ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!