ಹಂಪಿಯಲ್ಲಿ ಇಂದಿನಿಂದ ಜಿ20 ಶೃಂಗಸಭೆ: ವಿವಿಧ ದೇಶಗಳ ಪ್ರತಿನಿಧಿಗಳು ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐತಿಹಾಸಿಕ ತಾಣ ಹಂಪಿಯಲ್ಲಿ ಇಂದಿನಿಂದ 8 ದಿನಗಳ ಕಾಲ ಜಿ20 ಶೃಂಗಸಭೆ ನಡೆಯಲಿದೆ.
ಭಾರತ ಜಿ20 ಶೃಂಗಸಭೆಯ ಅಧ್ಯಕ್ಷತೆ ವಹಿಸಿದ್ದು, ವಿಜಯನಗರ ವಾಸ್ತುಶಿಲ್ಪ ಶೈಲಿ, ವಿಜಯನಗರ ಸಾಮ್ರಾಜ್ಯದ ಹಿರಿಮೆ-ಗರಿಮೆಯನ್ನು ಇಡೀ ಜಗತ್ತಿಗೆ ಪರಿಚಯಿಸುವ ಉದ್ದೇಶವನ್ನು ಹೊಂದಿದೆ.

ಇಂದಿನಿಂದ ಜು.13ರವರೆಗೆ ಜಿ20 ರಾಷ್ಟ್ರಗಳ ಸಾಂಸ್ಕೃತಿಕ ಕಾರ್ಯ ತಂಡದ ಸಭೆ ನಡೆಯಲಿದೆ. ಈ ತಂಡ ಭಾರತದ ಸಂಸ್ಕೃತಿ ಸೇರಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಿದೆ. ಜೊತೆಗೆ ಸದಸ್ಯ ರಾಷ್ಟ್ರಗಳ ಐತಿಹಾಸಿಕ ಪರಂಪರೆಗಳನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಬಗ್ಗೆ ಜಿ-20 ರಾಷ್ಟ್ರಗಳು ಸುದೀರ್ಘವಾಗಿ ಚರ್ಚೆ ನಡೆಸಿ ನಿರ್ಣಯ ತೆಗೆದುಕೊಳ್ಳಲಿವೆ. ಈ ಸಭೆಯಲ್ಲಿ ದೇಶ-ವಿದೇಶದ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.

ಜಿ20 ಶೆರ್ಪಾ ಸಭೆ:

ಈ ತಂಡದ ಬಳಿಕ ಜಿ-20 ಶೆರ್ಪಾ ಸಭೆ ಜು.13ರಿಂದ 16ರವರೆಗೆ ನಡೆಯಲಿದೆ. ಜಿ20 ರಾಷ್ಟ್ರಗಳ ಪ್ರಧಾನಿಗಳ ಜೊತೆಗೆ ನೇರ ಸಂಪರ್ಕ ಹೊಂದಿರುವ ಅಧಿಕಾರಿಗಳು ಶೆರ್ಪಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ 20 ದೇಶಗಳ ಪೈಕಿ 19 ದೇಶಗಳ 30 ಪ್ರತಿನಿಧಿಗಳು, 9 ಆಹ್ವಾನಿತ ದೇಶಗಳ 16 ಪ್ರತಿನಿಧಿಗಳು ಹಾಗೂ 4 ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಉಭಯ ಸಭೆಗಳಲ್ಲಿ 200ಕ್ಕೂ ಅಧಿಕ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!