ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಯಶಸ್ವಿಯಾಗಿದ್ದು, ಈ ಹಿನ್ನೆಲೆ ಜಾಗತಿಕ ಕಾರ್ಯಕ್ರಮದ ದೊಡ್ಡ ಯಶಸ್ಸಿಗಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಲಾಗಿದೆ.
ಈ ಕುರಿತು ಇಂದು ನಡೆದ ಕೇಂದ್ರ ಸಚಿವ ಸಂಪುಟವು ನಿರ್ಣಯ ಅಂಗೀಕರಿಸಿದೆ.
ಕೇಂದ್ರ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಈ ಯಶಸ್ವಿ ಕಾರ್ಯಕ್ರಮಕ್ಕಾಗಿ ಇಡೀ ದೇಶದ ಪರವಾಗಿ ಪ್ರಧಾನಿ ಮೋದಿಯವರನ್ನು ಅಭಿನಂದಿಸಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.
ಸಭೆಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ನಿರ್ಣಯವನ್ನು ಮಂಡಿಸಿದರು ಎಂದು ತಿಳಿಸಿದ್ದಾರೆ.
ಜಿ20 ಶೃಂಗಸಭೆಯ ಯಶಸ್ಸು ಪ್ರಧಾನಿ ಮೋದಿಯವರ ಬಲವಾದ ಇಚ್ಛಾಶಕ್ತಿ ಮತ್ತು ಸಮರ್ಥ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ. ಇದನ್ನು ಭಾರತ ಮಾತ್ರವಲ್ಲದೆ ಇಡೀ ವಿಶ್ವವೇ ಒಪ್ಪಿಕೊಂಡಿದೆ. ಜಿ20 ದೆಹಲಿ ಘೋಷಣೆಯ ಮೇಲೆ ನಾಯಕರ ಸರ್ವಾನುಮತದ ಒಮ್ಮತವನ್ನು ವ್ಯಕ್ತಪಡಿಸುವುದು, ಜಾಗತಿಕ ಕಾರ್ಯಸೂಚಿ ಸೆಟ್ಟಿಂಗ್ ನಲ್ಲಿ ದೇಶವು ಪ್ರಮುಖ ಪಾತ್ರ ವಹಿಸುತ್ತಿರುವುದರಿಂದ ಭಾರತದ ಬೆಳೆಯುತ್ತಿರುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಇದರ ಶ್ರೇಯಸ್ಸು ದೇಶದ ನಾಯಕತ್ವಕ್ಕೆ ಸಲ್ಲುತ್ತದೆ ಎಂದು ಹೇಳಿದರು.