ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 12, 13ರಂದು ನಡೆಯಲಿರುವ ಜಿ7 ಶೃಂಗಸಭೆಯ ಔಟ್ ರೀಚ್ ಸೆಷನ್ ನ ವರ್ಚುವಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಯುಕೆ ಅಧ್ಯಕ್ಷತೆಯೊಂದಿದೆ ಜಿ7 ಸಭೆ ನಡೆಯುತ್ತಿದ್ದು, ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ದಕ್ಷಿಣ ಕೊರಿಯಾ ರಾಷ್ಟ್ರಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜೂನ್ 12,13ರಂದು ವರ್ಚುವಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರು ಜಿ7 ಶೃಂಗಸಭೆಗೆ ಖುದ್ದಾಗಿ ಭಾಗಿಯಾಗುವುದಿಲ್ಲ ಎಂದು ಈ ಹಿಂದೆಯೇ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಾಗ್ಚಿ ತಿಳಿಸಿದ್ದರು.