ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಮೇಲೆ ರಷ್ಯಾ ದಾಳಿ ಮತ್ತೆ ತೀವ್ರಗೊಂಡಿದೆ. ಈ ಹಿನ್ನೆಲೆ ಜಿ7 ದೇಶಗಳು (ಯುಕೆ, ಜರ್ಮನಿ, ಇಟಲಿ, ಕೆನಡಾ, ಯುಎಸ್ಎ, ಫ್ರಾನ್ಸ್, ಜಪಾನ್) ರಷ್ಯಾಕ್ಕೆ ಎಚ್ಚರಿಕೆ ನೀಡಿವೆ. ಉಕ್ರೇನ್ ಮೇಲೆ ಪರಮಾಣು ಅಸ್ತ್ರಗಳ ಮೂಲಕ ದಾಳಿ ನಡೆಸಿದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರಷ್ಯಾಗೆ ಎಚ್ಚರಿಕೆ ನೀಡಿದೆ.
ಉಕ್ರೇನ್ ವಿರುದ್ಧ ರಷ್ಯಾದ ಉದ್ದೇಶಪೂರ್ವಕ ಕ್ರಮಗಳನ್ನು ನಾವು ಪ್ರತಿಭಟಿಸುತ್ತೇವೆ. ಭಾಗಶಃ ಮಿಲಿಟರಿ ಸಜ್ಜುಗೊಳಿಸುವಿಕೆ ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಬೇಜವಾಬ್ದಾರಿ ಕಾಮೆಂಟ್ಗಳು ಜಾಗತಿಕ ಶಾಂತಿ ಮತ್ತು ಭದ್ರತೆಗೆ ಧಕ್ಕೆ ತರುತ್ತವೆ. ನಾವು ಮತ್ತೊಮ್ಮೆ ಹೇಳುತ್ತಿದ್ದೇವೆ ರಷ್ಯಾ ರಾಸಾಯನಿಕ, ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶ್ವೇತಭವನ ಹೇಳಿದೆ.
ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಇತ್ತೀಚೆಗೆ ನಡೆಸಿದ ಕ್ಷಿಪಣಿ ದಾಳಿಯನ್ನು ಹಲವು ದೇಶಗಳು ಖಂಡಿಸಿದ್ದು, ಮುಖ್ಯವಾಗಿ ಜಿ7 ದೇಶಗಳು ಈ ವಿಷಯದ ಬಗ್ಗೆ ಚರ್ಚಿಸಿವೆ. ಉಕ್ರೇನ್ ತನ್ನ ಗಡಿಯನ್ನು ಬದಲಾಯಿಸಲು ಬಿಡುವುದಿಲ್ಲ. ರಷ್ಯಾ ಅಂತಾರಾಷ್ಟ್ರೀಯ ಕಾನೂನುಗಳನ್ನು ಉಲ್ಲಂಘಿಸಿ ವರ್ತಿಸುತ್ತಿದ್ದು, ಉಕ್ರೇನ್ನಿಂದ ಪಡೆ ಮತ್ತು ಮಿಲಿಟರಿ ಉಪಕರಣಗಳನ್ನು ಹಿಂತೆಗೆದುಕೊಳ್ಳುವಂತೆ ಜಿ7 ದೇಶಗಳು ರಷ್ಯಾವನ್ನು ಒತ್ತಾಯಿಸಿವೆ.