ಸುರತ್ಕಲ್ ಟೋಲ್‌ಗೇಟ್ ಸ್ಥಳಾಂತರಕ್ಕೆ ಸಚಿವ ಗಡ್ಕರಿ ಒಪ್ಪಿಗೆ: ನಳಿನ್ ಕುಮಾರ್ ಕಟೀಲ್

ಹೊಸದಿಗಂತ ವರದಿ,ಮಂಗಳೂರು:

ಸುರತ್ಕಲ್ ಟೋಲ್‌ಗೇಟನ್ನು ಸ್ಥಳಾಂತರಿಸಿ ಎನ್.ಎಂ.ಪಿ.ಟಿ ಒಳಗೆ ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಸುರತ್ಕಲ್ ಟೋಲ್ ವಿಚಾರದ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಅಧಿಕಾರಿಗಳೊಂದಿಗೆ ನವದೆಹಲಿಯ ಸಚಿವರ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯವಾಗಿ ಸುರತ್ಕಲ್ ಟೋಲ್ ಗೇಟ್ ಸ್ಥಳಾಂತರ / ವಿಲೀನಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಅದರಂತೆ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿರುವ ದೃಷ್ಟಿಯಿಂದ ಸುರತ್ಕಲ್ ಟೋಲ್‌ಗೇಟನ್ನು ಸ್ಥಳಾಂತರಿಸಿ ಎನ್.ಎಂ.ಪಿ.ಟಿ. ಒಳಗೆ ಸ್ಥಾಪಿಸುವ ನಿರ್ಧಾರಕ್ಕೆ ಬರಲಾಯಿತು. ಎನ್.ಎಂ.ಪಿ.ಟಿಯ ಒಳಗೆ ಬರುವ ಹಾಗೂ ಹೊರಗೆ ಹೋಗುವ ವಾಹನಗಳಿಂದ ಮಾತ್ರ ಟೋಲ್ ಸಂಗ್ರಹಿಸಲು ಸಚಿವರು ಸೂಚಿಸಿದರು ಎಂದು ಅವರು ತಿಳಿಸಿದ್ದಾರೆ.
ಮಾಣಿ – ಸಂಪಾಜೆ – ಮಡಿಕೇರಿ ಸಂಪರ್ಕಿಸುವ ರಸ್ತೆಯನ್ನು ಮಾಣಿಯಿಂದ ಸಂಪಾಜೆವರೆಗೆ ಚತುಷ್ಪಥ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಹಾಗೂ ಸಂಪಾಜೆಯಿಂದ ಮಡಿಕೇರಿವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ಬಗ್ಗೆ ಸಭೆಯಲ್ಲಿ ಸಚಿವರು ಆದೇಶಿಸಿದರು.
ರಾಜ್ಯ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಮೈಸೂರು ಸಂಸದ ಪ್ರತಾಪ್ ಸಿಂಹ , ಕೋಲಾರ ಸಂಸದ ಮುನಿಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸದಸ್ಯ ಆರ್. ಕೆ. ಪಾಂಡೆ, ಹೆಚ್ಚುವರಿ ಕಾರ್ಯದರ್ಶಿ ಗೋ ಸಾಹೇಲ್ , ರಾಷ್ಟ್ರೀಯ ಹೆದ್ದಾರಿ ಸದಸ್ಯ ( ಟೋಲ್ ವಿಭಾಗ) ಮಹಾವೀರ್ ಸಿಂಗ್ ಉಪಸ್ಥಿತರಿದ್ದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!