ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪಘಾತಕ್ಕೊಳಗಾದ ವ್ಯಕ್ತಿಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇರುತ್ತದೆ. ಅದೆಷ್ಟೋ ಪ್ರಕರಣಗಳಲ್ಲಿ ಜೀವ ಹೋಗುತ್ತಿದ್ದರೂ ಯಾರೂ ನೆರವಿಗೆ ಬರದೇ ಪ್ರಾಣ ಬಿಟ್ಟಿರುವುದುಂಟು. ಈ ಹಿನ್ನೆಲೆಯಲ್ಲಿ, ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿದೆ.
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಪಘಾತದ ಗಾಯಾಳುವಿನ ನೆರವಿಗೆ ಮುಂದಾಗುವ ಮೂರನೇ ವ್ಯಕ್ತಿಗೆ 25,000 ರೂ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ದೇಶದಲ್ಲಿ ವರ್ಷಕ್ಕೆ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಇದರಿಂದ ಜಿಡಿಪಿಗೆ ಶೇ. 3 ನಷ್ಟವಾಗುತ್ತದೆ. ಸರಿಯಾದ ಡಿಪಿಆರ್ ಇಲ್ಲದೆ ರಸ್ತೆ ನಿರ್ಮಾಣಗೊಂಡಿರುವುದು ಅಪಘಾತಗಳಿಗೆ ಕಾರಣ ಎಂದು ತಿಳಿಸಿದ್ದಾರೆ.