ಟೂರ್ನಿಯ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಗಾಯಕ್ವಾಡ್: ಗುಜರಾತ್ ಗೆ 179 ರನ್ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

IPL 2023 ಟೂರ್ನಿಯ ಮೊದಲ ಪಂದ್ಯ ಅದ್ಧೂರಿಯಾಗಿ ಆರಂಭಗೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ್ದಾರೆ.

ಗಾಯಕ್ವಾಡ್ ಸಿಡಿಸಿದ 92 ರನ್ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ನಷ್ಟಕ್ಕೆ 178 ರನ್ ಸಿಡಿಸಿದೆ.

ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್ ಇಳಿದ ಚೆನ್ನೈ ಸೂಪರ್ ಕಿಂಗ್ಸ್ ಗೆ ಡಿವೋನ್ ಕಾನ್ವೇ ಕೇವಲ 1 ರನ್ ಸಿಡಿಸಿ ಔಟಾದರು.

ರುತುರಾಜ್ ಗಾಯಕ್ವಾಡ್ ಸ್ಫೋಟಕ ಬ್ಯಾಟಿಂಗ್ ಚೆನ್ನೈ ತಂಡಕ್ಕೆ ನೆರವಾಯಿತು. ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೂ ರುತುರಾಜ್ ಗಾಯಕ್ವಾಡ್ ಹೋರಾಟ ಚೆನ್ನೈ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು.

ಮೊಯಿನ್ ಆಲಿ 23 ರನ್ ಸಿಡಿಸಿ ನಿರ್ಗಮಿಸಿದರು. ಭಾರಿ ನಿರೀಕ್ಷೆಯೊಂದಿಗೆ ಕಣಕ್ಕಿಳಿದ ಬೆನ್ ಸ್ಟೋಕ್ಸ್ ಕೇವಲ 7 ರನ್ ಸಿಡಿಸಿ ಔಟಾದರು. ಇತ್ತ ಅಂಬಾಟಿ ರಾಯುಡು ಹೋರಾಟ 12 ರನ್‌ಗೆ ಅಂತ್ಯಗೊಂಡಿತು.

ಜಡೇಜಾ 1 ರನ್ ಸಿಡಿಸಿ ಔಟಾದರು. ಇತ್ತ ಶಿವಂ ದುಬೆ 19 ರನ್ ಸಿಡಿಸಿ ನಿರ್ಗಮಿಸಿದರು. ಅಂತಿಮ ಓವರ್‌ನಲ್ಲಿ ನಾಯಕ ಎಂ.ಎಸ್.ಧೋನಿ ಅಬ್ಬರ ಆರಂಭಗೊಂಡಿತು. ಧೋನಿ ಅಜೇಯ 14 ರನ್ ಸಿಡಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ 7 ವಿಕೆಟ್ ನಷ್ಟಕ್ಕೆ 178 ರನ್ ಸಿಡಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!