August 29, 2026
Saturday, August 29, 2026
spot_img

ಮೈಸೂರಿನ ದಸರಾ ಅಂಗಳಕ್ಕೆ ಗಜಪಡೆ ಎಂಟ್ರಿ: 9 ಆನೆಗಳಿಗೆ ಅದ್ಧೂರಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ 9 ಆನೆಗಳು ಅರಮನೆ ಅಂಗಳಕ್ಕೆ ಕಾಲಿಟ್ಟಿವೆ.

ಶುಕ್ರವಾರ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಅರಮನೆ ಆವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಡೊಳ್ಳು ಕುಣಿತ, ಕಂಸಾಳೆ, ಸೇರಿದಂತೆ ಹಲವಾರು ಸಂಗೀತ ಕಾರ್ಯಕ್ರಮಗಳು ಸಮಾರಂಭಕ್ಕೆ ವಿಶೇಷ ಮೆರುಗು ನೀಡಿದವು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮತ್ತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಮೊದಲಹಂತದಲ್ಲಿ ಆಗಮಿಸಿದ್ದು ಯಾರು?

ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಏಕಲವ್ಯ, ಧನಂಜಯ, ಗೋಪಿ, ಕಾವೇರಿ, ಪ್ರಶಾಂತ ಮತ್ತು ಶ್ರೀರಾಮ ಅರಮನೆಗೆ ಆಗಮಿಸಿವೆ.

ಇದನ್ನೂ ಓದಿ:

ಇದೇ ಸಂದರ್ಭದಲ್ಲಿ ಮಾವುತರು ಹಾಗೂ ಕಾವಾಡಿಗಳಿಗೆ ಅಗತ್ಯ ವಸ್ತುಗಳ ಕಿಟ್‌ಗಳನ್ನು ವಿತರಿಸಲಾಯಿತು. ಸುಮಾರು ಎರಡು ತಿಂಗಳ ಕಾಲ ಕುಟುಂಬ ಸಮೇತರಾಗಿ ಮೈಸೂರಿನಲ್ಲೆ ಇರೋದ್ರಿಂದ ಗ್ಯಾಸ್ ಸ್ಟೌವ್, ಗ್ಯಾಸ್ ಪೈಪ್, ಬಟ್ಟೆ, ಟವೆಲ್, ಬಕೆಟ್, ಜಗ್, ಚಾಪೆ ಹಾಗೂ ಬೆಡ್‌ಶೀಟ್ ಸೇರಿದಂತೆ ಹಲವು ಸಾಮಗ್ರಿಗಳನ್ನು ವಿತರಿಸಲಾಯಿತು.

ಅಕ್ಟೋಬರ್ 11ರಿಂದ ದಸರಾ ವೈಭವ

ಈ ವರ್ಷದ ಮೈಸೂರು ದಸರಾ ಮಹೋತ್ಸವ ಅಕ್ಟೋಬರ್ 11ರಂದು ಶುರುವಾಗಲಿದೆ. ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ನಡೆಯಲಿರುವ ದಸರಾ ಕ್ರಾಯಕ್ರಮದ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಯಾರು ಭಾಗವಹಿಸಲಿದ್ದಾರೆ ಅನ್ನೋದನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !