ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಗಜರಾಜ ಕೊನೆಗೂ ಸೆರೆ

ಹೊಸದಿಗಂತ ವರದಿ ​ಮಡಿಕೇರಿ: ವೀರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ದುಬಾರೆ ಹಾಗೂ ಮತ್ತಿಗೋಡು ಶಿಬಿರದ ಸಾಕಾನೆಗಳಾದ ಅಭಿಮನ್ಯು, ಮಹೇಂದ್ರ, ರಂಜನ್, ಭೀಮಾ, ಸುಗ್ರೀವ ಹಾಗೂ ಹರ್ಷನ ಸಹಕಾರದಿಂದ ಸತತ ಐದು ಗಂಟೆಗಳ ಕಾರ್ಯಾಚರಣೆಯ ಬಳಿಕ ಕಾಡಾನೆಯನ್ನು ಸೆರೆಹಿಡಿಯಲಾಯಿತು. ಚೆಂಬೆಬೆಳ್ಳೂರು ಗ್ರಾಮದ ಕಾಫಿ ತೋಟವೊಂದರ ಸಮೀಪ ಕಂಡು ಬoದ ಕಾಡಾನೆಗೆ ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪ ಅರಣ್ಯಾಧಿಕಾರಿ ಶಾರ್ಪ್ … Continue reading ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಗಜರಾಜ ಕೊನೆಗೂ ಸೆರೆ