ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ಪಡೆದುಕೊಂಡಿತ್ತು. ಆದ್ರೆ ಮುಜರಾಯಿ ಇಲಾಖೆ ದೇವಾಲಯವನ್ನು ವಶಕ್ಕೆ ಪಡೆದಿರುವುದಕ್ಕೆ ಟ್ರಸ್ಟ್ ಪದಾಧಿಕಾರಿಗಳು ಮತ್ತು ಭಕ್ತರಿಂದ ಖಂಡನೆ ವ್ಯಕ್ತವಾಗುತ್ತಿದ್ದಂತೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 1,85,000 ದೇವಸ್ಥಾನಗಳಿವೆ. ಇದರಲ್ಲಿ 35 ಸಾವಿರ ಮುಜರಾಯಿ ಇಲಾಖೆಗೆ ಒಳಪಟ್ಟಿವೆ. 1,50,000 ಖಾಸಗಿ ದೇವಸ್ಥಾನಗಳಿವೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದರು.
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ. ಹಣ ತೆಗೆದುಕೊಂಡು ಹೋಗುತ್ತಿದ್ದ ವಿಡಿಯೋ ನೀವೇ ನೋಡಿದ್ದೀರಿ. ಐದು ವರ್ಷ ಆದ ಮೇಲೆ ದೇವಸ್ಥಾನವನ್ನು ವಾಪಸ್ ಕೊಡುತ್ತೇವೆ. ಬಿಜೆಪಿ ಸರ್ಕಾರ ಎಂಟು ದೇವಸ್ಥಾನಗಳನ್ನು ವಶಕ್ಕೆ ಪಡೆದಿತ್ತು. ಅವ್ಯವಹಾರ ನಡೆದಿತ್ತು ಅಂತ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡು ವಾಪಾಸ್ ಕೊಟ್ಟಿದೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯಹಾರ ನಡೆದಾಗ ವಶಕ್ಕೆ ಪಡೆಯುವ ಅಧಿಕಾರ ಸರ್ಕಾರಕ್ಕೆ ಇದೆ ಎಂದರು.