ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾದ ಗಾಲಿ ಜನಾರ್ದನ ರೆಡ್ಡಿ

 ಹೊಸದಿಗಂತ ವರದಿ,ಬಳ್ಳಾರಿ:

ಕೆಆರ್ ಪಿ ಪಕ್ಷವನ್ನು ಬಿಜೆಪಿಯೊಂದಿಗೆ ಇತ್ತೀಚೆಗೆ ವಿಲೀನ ಮಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು, ಶುಕ್ರವಾರ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಗೆ ಭೇಟಿ ನೀಡಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೇರಿದಂತೆ ವಿವಿಧ ಗಣ್ಯರನ್ನು ಭೇಟಿ ಮಾಡಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಪಕ್ಷದ ಸಂಸ್ಥಾಪನ ದಿನದಂದು ಭೇಟಿ ಮಾಡಿದ್ದು ನನ್ನ ಜೀವನದ ಅವಿಸ್ಮರಣೀಯ ದಿನವಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಲೋಕಸಭಾ ಚುನಾವಣಾ ಕುರಿತು, ಸಂತೋಷ್ ಜಿ ಹಾಗೂ ನಡ್ಡಾಜಿ ಅವರು ಕೆಲವೊಂದು ನಿರ್ದೇಶನಗಳನ್ನು ನೀಡಿದ್ದು, ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಶ್ರಮಿಸುವೆ, ಪ್ರಧಾನಿ ಮೋದಿಜಿ ಅವರು ಮತ್ತೊಮ್ಮೆ ದೇಶದ ಪ್ರಧಾನ ಮಂತ್ರಿಯಾಗಲು ಹಗಲಿರುಳು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!