July 17, 2026
Friday, July 17, 2026
spot_img

ಡ್ರೋನ್ ಕ್ಯಾಮರಾ ಮೂಲಕ ಜೂಜಾಟದ ಅಡ್ಡೆ ಪತ್ತೆ; 6 ಜನ ಖಾಕಿ ವಶಕ್ಕೆ

ಹೊಸದಿಗಂತ ವರದಿ ಕಲಬುರಗಿ:

ಜಿಲ್ಲೆಯ ಜೇವರ್ಗಿ ತಾಲೂಕಿನ ಇಜೇರಿ ಗ್ರಾಮದ ಸಮೀಪದ ಜಮೀನೊಂದರಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಮೇಲೆ ಜೇವರ್ಗಿ ಪೊಲೀಸರು ದಾಳಿ ನಡೆಸಿದ್ದಾರೆ.ಸ್ಥಳೀಯರಿಂದ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಜೂಜುಕೋರರು ಪೊಲೀಸರ ಕಣ್ತಪ್ಪಿಸಿ ಹೊಲದಲ್ಲಿ ಕುಳಿತು ಜೂಜಾಟ ನಡೆಸುತ್ತಿದ್ದರು. ಇದನ್ನು ಪತ್ತೆಹಚ್ಚಲು ಪೊಲೀಸರು ಡ್ರೋಣ್ ಕ್ಯಾಮರಾ ಬಳಸಿ ಅಡ್ಡೆಯ ನಿಖರ ಸ್ಥಳವನ್ನು ಗುರುತಿಸಿದ್ದಾರೆ. ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ 6 ಜನರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ ನಗದು, ಕಾರು ಹಾಗೂ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಜೇವರ್ಗಿ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !